ಬೆಳ್ತಂಗಡಿ ವಕೀಲರ ಸಂಘದ ನಿಯೋಗ ದ.ಕ.ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಬೇಟಿ: ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಗೆ ಆಹ್ವಾನ

ಬೆಳ್ತಂಗಡಿ ವಕೀಲರ ಸಂಘದ ನಿಯೋಗ ದ.ಕ.ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಬೇಟಿ: ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಗೆ ಆಹ್ವಾನ

Share
IMG_20260523_184232 ಬೆಳ್ತಂಗಡಿ ವಕೀಲರ ಸಂಘದ ನಿಯೋಗ ದ.ಕ.ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಬೇಟಿ:  ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಗೆ ಆಹ್ವಾನ

ಬೆಳ್ತಂಗಡಿ : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು ಈ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗವು ಭಾನುವಾರ ಬೆಂಗಳೂರಿನ ನ್ಯಾಯ ಗ್ರಾಮದಲ್ಲಿರುವ ವಸತಿ ಗೃಹದಲ್ಲಿ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಚ್.ಟಿ ನರೇಂದ್ರಪ್ರಸಾದ್ ಅವರನ್ನು ಬೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಮಹಮ್ಮದ್ ನವಾಜ್ ಅವರನ್ನು ಭೇಟಿ ಮಾಡಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಲಾಯಿತು.

ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಸಂಘದ ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷರಾದ ಶಿವ ಕುಮಾರ್ ಎಸ್ ಎಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಮತ್ತು ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ. ಉಪಸ್ಥಿತರಿದ್ದರು.

Post Comment

ಟ್ರೆಂಡಿಂಗ್‌

error: Content is protected !!