9/11 ಮುಗಿಯದ ಸಮಸ್ಯೆ; ಅಧಿಕಾರಿಗಳೊಂದಿಗೆ ಉಸ್ತುವಾರಿ ಸಚಿವರ ಸಭೆ: ಶೀಘ್ರ ಪರಿಹರಿಸುವಂತೆ ಸೂಚನೆ

ಬೆಳ್ತಂಗಡಿ : ಹಲವು ಸಮಯಗಳಿಂದ ಜನರ ನೆಮ್ಮದಿ ಕೆಡಿಸಿದ್ದ
9/11 ಸಮಸ್ಯೆಗಳ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ರಕ್ಷಿತ್ ಶಿವರಾಂ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ, ವಿಳಂಬ, ಟೋಕನ್ ವ್ಯವಸ್ಥೆ ಸರಿಪಡಿಸುವಂತೆ , ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಮಾಜಿ ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆದು 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ ಸಾರ್ವಜನಿಕರ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಎಲ್ಲಾ ವಿಚಾರದ ಬಗ್ಗೆ ವಿಸ್ತೃತವಾದ ಚರ್ಚೆಯನ್ನು ನಡೆಸಿ. ಉಸ್ತುವಾರಿ ಸಚಿವರು ಎಲ್ಲ ಅಧಿಕಾರಿಗಳಿಂದ ಪಡೆದ ಮಾಹಿತಿಯನ್ವಯ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ
ಕ್ರಮ ಕೈಗೊಳ್ಳುವುದಾಗಿ ಭರವಸೆಯಿತ್ತರು.

ಈ ಸಂದರ್ಭ ದ.ಕ. ಮೆಸ್ಕಾಂ ಅಧ್ಯಕ್ಷರಾದ ಕೆ ಹರೀಶ್ ಕುಮಾರ್, ದ.ಕ. ಜಿಲ್ಲಾಧಿಕಾರಿ ದರ್ಶನ್ , ನಗರ ಯೋಜನಾಧಿಕಾರಿಗಳು, ಮೂಡ ಕಮಿಷನರ್, ಸರ್ವೆ ಇಲಾಖೆಯ ಅಧಿಕಾರಿಗಳು,
ಮೂಡ ಅಧಿಕಾರಿಗಳು, ಬೆಳ್ತಂಗಡಿಯ ತಾಪಂ ಕಾರ್ಯನಿರ್ವಹಣಾಧಿಕಾರಿ, ಪ ಪಂ ಮುಖ್ಯಾಧಿಕಾರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.














Post Comment