ಕಣಿಯೂರು;ಸಿ.ಎ.ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅವರಿಂದ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆ

ಕಣಿಯೂರು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ (ಸ.ಉ.ಪ್ರ.ಶಾಲೆ) ಕಣಿಯೂರು ಕಸಬಾ ಇಲ್ಲಿನ ವಿದ್ಯಾರ್ಥಿಗಳಿಗೆ
ಪದ್ಮುಂಜ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ
ರಕ್ಷಿತ್ ಪಣೆಕ್ಕರ ಅವರಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ:7ರಂದು ಶಾಲಾ ಆವರಣದಲ್ಲಿ ಜರುಗಿತು.
ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಪದ್ಮುಂಜ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ “ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿವರ್ಷವೂ ಈ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ.

ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗಬೇಕು” ಎಂದು ಶುಭಹಾರೈಸಿದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಕಾಂತರಾಜ್ , ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಹಕಾರಿ ಸಂಘದ ಅಧ್ಯಕ್ಷರ ಕೊಡುಗೆಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.















Post Comment