ಬಂದಾರು; ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮಶಾಲಾ ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

ಬಂದಾರು : ಇಲ್ಲಿನ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ವರ್ಷಾಚರಣೆಯ ಸವಿನೆನಪಿಗಾಗಿ ಹಿರಿಯ ವಿದ್ಯಾರ್ಥಿಗಳು, ಎಸ್.ಡಿ. ಎಂ.ಸಿ. ಮತ್ತು ಊರ ವಿದ್ಯಾಭಿಮಾನಿ ದಾನಿಗಳ ಸಹಕಾರದೊಂದಿಗೆ 26 ಲಕ್ಷ ರೂಪಾಯಿ ವೆಚ್ಚದಲ್ಲಿ ಆರಂಭಗೊಳ್ಳುತ್ತಿರುವ ಉದ್ದೇಶಿತ ತರಗತಿ ಕೊಠಡಿ ಕಾಮಗಾರಿಗೆ ಶಂಕು ಸ್ಥಾಪನೆ ಕಾರ್ಯಕ್ರಮವು ಜೂ.29ರಂದು ನೆರವೇರಿತು.
ಅರ್ಚಕರಾದ ಪ್ರಶಾಂತ ಹೊಳ್ಳ ಅವರು ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿ ಹಿರಿಯ ವಿದ್ಯಾರ್ಥಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಪಿ.ತಿಮ್ಮಯ್ಯ ಗೌಡ ಅವರು ಶಿಲಾನ್ಯಾಸಗೈದರು.

ಈ ಸಂದರ್ಭ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುರುಪ್ರಸಾದ್ ಭಟ್, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಉಪಾಧ್ಯಕ್ಷ ವೆಂಕಪ್ಪ ಪಿ.ಎಸ್., ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಶಾಂತ್ ನಿರುಂಬುಡ, ನಿವೃತ್ತ ಶಿಕ್ಷಕಿ ರೇವತಿ ಅನಾಬೆ, ಮುಖ್ಯ ಶಿಕ್ಷಕ ಶೀನಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಬಾಬಿ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ್ ಅಂಡಿಲ, ಕೋಶಾಧಿಕಾರಿ ಯಶೋಧಾ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಮೀನಾಕ್ಷಿ ಮತ್ತಿತರು ಉಪಸ್ಥಿತರಿದ್ದರು.
ಎಸ್ ಡಿ ಎಂ ಸಿ, ಅಮೃತ ಮಹೋತ್ಸವ ಸಮಿತಿ , ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಇದ್ದರು.














Post Comment