ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ 143 ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಷನ್ ಬಂದಾರು ಇವರ ಪ್ರಾಯೋಜಕತ್ವದಲ್ಲಿ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಜುಲೈ 13ನೇ ಸೋಮವಾರದಂದು ವಿತರಿಸಲಾಯಿತು.
ಪುಸ್ತಕಗಳ ವಿತರಣೆಯನ್ನು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು.
ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ , ಬೆಸ್ಟ್ ಫೌಂಡೇಷನ್ ಬಂದಾರು ಇದರ ಅಧ್ಯಕ್ಷರಾದ ನಾಣ್ಯಪ್ಪ ಗೌಡ ಮತ್ತು ತಂಡದ ಶೈಕ್ಷಣಿಕ ಪ್ರೋತ್ಸಾಹಕ್ಕೆ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಉಮೇಶ್ ಗೌಡ ಪೋಷಕರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭ ವಿನಯಚಂದ್ರ ಗೌಡ, ಶಿಕ್ಷಕವೃಂದದವರು ಉಪಸ್ಥಿತರಿದ್ದರು.
















Post Comment