ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ

ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ

Share
IMG-20260903-WA0009 ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ

ಬೆಂಗಳೂರು : ಶತಮಾನಗಳಿಂದ ವಿದ್ಯುತ್‌ ಸಂಪರ್ಕವಿಲ್ಲದೆ ಕತ್ತಲಲ್ಲೇ ಜೀವನ ನಡೆಸುತ್ತಿದ್ದ ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮೋದನೆ ದೊರೆತಿದ್ದು ಅರಣ್ಯದಂಚಿನ ನಿವಾಸಿಗಳಲ್ಲಿ ಸಂತಸ ಮೂಡಿದೆ.

ಬೆಳ್ತಂಗಡಿ ಹಲವಾರು ವರ್ಷಗಳಿಂದ ವಿದ್ಯುತ್ ಸಂಪರ್ಕಕ್ಕಾಗಿ ಅಲೆದಾಡುತ್ತಿದ್ದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮತ್ತು ನಾವೂರು ಗ್ರಾಮದಲ್ಲಿ 11ಕೆವಿ ವಿದ್ಯುತ್ ವಿತರಣಾ ಮಾರ್ಗದ ಭೂಗತ ಕೇಬಲ್ ಅಳವಡಿಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುತ್ಲೂರು ಮತ್ತು ನಾವೂರು ಜನವಸತಿ ಪ್ರದೇಶಕ್ಕೆ ವಿದ್ಯುತ್‌ ಸಂಪರ್ಕ ಒದಗಿಸುವ ಸಲುವಾಗಿ ಅನುದಾನ ಮೀಸಲಿಡಲು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಮತ್ತು ನೇತೃತ್ವದಲ್ಲಿ ಸೆ. 2ರಂದು
ಇಂಧನ ಸಚಿವರನ್ನು ಭೇಟಿಯಾಗಿ ಅಹವಾಲು ಸಲ್ಲಿಸಲಾಯಿತು.

IMG-20260615-WA0021-5 ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ

ಕರ್ನಾಟಕರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 91ನೇ ಸಭೆಯಲ್ಲಿ ಕೆಲವು ಷರತ್ತುಗಳಿಗೊಳಪಟ್ಟು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಮತ್ತು ನಾವೂರು ಪ್ರದೇಶಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಅನುಮೋದನೆ ನೀಡಿದೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾವೂರು ಭಾಗದ 26 ಕುಟುಂಬಗಳು ಹಾಗೂ ಕುತ್ಲೂರು ಭಾಗದ ಸುಮಾರು 32 ಕುಟುಂಬಗಳು ವಿದ್ಯುತ್‌ ಸಂಪರ್ಕ ಹೊಂದಲು ಇದೀಗ ಅನುಮತಿ ದೊರಕಿದೆ.

ರಾಜ್ಯದ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರನ್ನು ಹಾಗೂ ಅರಣ್ಯ ಭವನದಲ್ಲಿ ಇಲಾಖಾ ಹಿರಿಯ ಅಧಿಕಾರಿಗಳನ್ನು
ರಕ್ಷಿತ್‌ ಶಿವರಾಂ ನೇತೃತ್ವದಲ್ಲಿ ಭೇಟಿಯಾಗಿ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿನ ಜನವಸತಿ ಪ್ರದೇಶಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲು ಅಗತ್ಯ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್‌, ಕುದುರೆಮುಖ ರಾಷ್ಟ್ರೀಯ ಉದ್ಯಾನದ ಜನರಿಗೆ ವಿದ್ಯುತ್‌ ಒದಗಿಸಲು ರಾಜ್ಯದ ಕಾಂಗ್ರೆಸ್‌ ಸರ್ಕಾದ ಬದ್ಧವಿದೆ. ಅದಕ್ಕೆ ಬೇಕಾಗುವ ಅನುದಾನ ಮೀಸಲಿಡಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಅರಣ್ಯ ಭವನಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಲಾಯಿತು.

IMG-20260615-WA0005-5-1024x1024 ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ನಿವಾಸಿಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮೋದನೆ

ಈ ಸಂದರ್ಭದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ, ಸಂಚಾಲಕ ಶೇಖರ್ ಲಾಯಿಲ, ಮುಖಂಡರಾದ ಸುಧಾಕರ ಕುತ್ಲೂರು , ಪ್ರಶಾಂತ್ ಕುತ್ಲೂರು , ಸಂತೋಷ್ ಕಲ್ಲಂಡ ನಾವರ, ವಸಂತ ಹಿತ್ತಿಲಪೇಲ, ನಾಗೇಶ್ ಸವಣಾಲು, ಶೇಖರ ಕಂಬುಜೆ ನಡ, ಲೋಕೇಶ್ ಕುದ್ಕೊಲಿ ನಡ, ವಸಂತ ಕಂಬುಜೆ ನಡ, ನವೀನ್ ಪುಲಿತ್ತಡಿ ನಾವೂರು, ನಿರಂಜನ್ ಆಯಿಲ ಉಪಸ್ಥಿತರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಪ್ರಯತ್ನದ ಫಲವಾಗಿ ವಿದ್ಯುತ್ ವಂಚಿತ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆದ ಪ್ರಯತ್ನ ಇದೀಗ ಒಂದು ಹಂತದಲ್ಲಿ ಈಡೇರಿದೆ ಎಂದು ಶೇಖರ್ ಲಾಯಿಲಾ ಮತ್ತು ಜಯಾನಂದ ಪಿಲಿಕಳ ತಿಳಿಸಿದ್ದಾರೆ.

Post Comment

ಟ್ರೆಂಡಿಂಗ್‌

error: Content is protected !!