ಬೆಳ್ತಂಗಡಿ; ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಗೆ ಲೋಕಾಯುಕ್ತ ಅಧಿಕಾರಿಗಳ ಅಚ್ಚರಿಯ ಭೇಟಿ!

ಬೆಳ್ತಂಗಡಿ; ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಗೆ ಲೋಕಾಯುಕ್ತ ಅಧಿಕಾರಿಗಳ ಅಚ್ಚರಿಯ ಭೇಟಿ!

Share
IMG-20260908-WA0008-1024x512 ಬೆಳ್ತಂಗಡಿ;  ಕುವೆಟ್ಟು, ಮಡಂತ್ಯಾರು ಗ್ರಾ.ಪಂ. ಗೆ ಲೋಕಾಯುಕ್ತ ಅಧಿಕಾರಿಗಳ ಅಚ್ಚರಿಯ ಭೇಟಿ!

ಬೆಳ್ತಂಗಡಿ : ತಾಲೂಕಿನ‌ ಎರಡು ಗ್ರಾಮಪಂಚಾಯತ್ ಕಾರ್ಯಾಲಯಗಳು ಸೇರಿದಂತೆ ದಕ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗಳಿಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಸೆಪ್ಟೆಂಬರ್ 8ನೇ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಅಚ್ವರಿ ಮೂಡಿಸಿದ್ದು ಮಹತ್ವದ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ಸುಮಾರು‌ 10 ಗಂಟೆ ವೇಳೆಗೆ ಗ್ರಾ.ಪಂ. ಕಾರ್ಯಾಲಯಕ್ಕೆ ದಿಡೀರ್ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ವಿವಿಧ ದೂರುಗಳು ಬಂದ ಹಿನ್ನಲೆಯಲ್ಲಿ ತನಿಖೆಯ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ‌.
ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದ
ಲೋಕಾಯುಕ್ತ ತಂಡದಲ್ಲಿ
ರಾಘವೇಂದ್ರ ಸಾಲಿಗ್ರಾಮ ,
ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿ ಒಟ್ಟು ಎಂಟು ಅಧಿಕಾರಿಗಳ ತಂಡ ಗ್ರಾಮಪಂಚಾಯತ್ ಗಳಿಗೆ
ಭೇಟಿ ನೀಡಿದ್ದು ದೂರುಗಳಿಗೆ ಸಂಬಂಧಿಸಿ ಕಡತಗಳನ್ನು
ಪರಿಶೀಲನೆ ಸಂಜೆವರೆಗೂ ಮುಂದುವರಿಯಲಿದೆ ಎಂಬ ಮಾಹಿತಿ ಇದೆ.

ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾ.ಪಂ, ಬಂಟ್ವಾಳ ತಾಲೂಕಿನ ಪುದು, ಮಾಣಿ, ಗೊಳ್ತಮಜಲು, ಪಾಣೆಮಂಗಳೂರು ಗ್ರಾ.ಪಂ. ,
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರ್ ಸೇರಿ ಒಟ್ಟು ಏಳು ಗ್ರಾಮಪಂಚಾಯತ್ ಗಳಿಗೆ ಕಾರವಾರ, ಉಡುಪಿ, ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಕಡತಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ.

Post Comment

ಟ್ರೆಂಡಿಂಗ್‌

error: Content is protected !!