ವೇಣೂರು; ದಲಿತ ಕುಟುಂಬದ ಜಾಗಕ್ಕೆ ಅಕ್ರಮ ಪ್ರವೇಶಿಸಿ ಬೇಲಿ ಕಿತ್ತೆಸೆದು ದಾಂಧಲೆ- ಜೀವಬೆದರಿಕೆ; ಎಟ್ರಾಸಿಟಿ ಪ್ರಕರಣ ದಾಖಲು

ಬೆಳ್ತಂಗಡಿ : ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೋರ್ವ ಕೃತ್ಯವನ್ನು ಆಕ್ಷೇಪಿಸಿದ ದಲಿತ ಕುಟುಂಬಗಳ ಮುಂದೆ ಉಟ್ಟ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ವೇಣೂರು ಸಮೀಪ ನಡೆದಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದಲೂ ವಾಸ್ತವ್ಯವಿದ್ದು ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದ್ದ ದಲಿತ ಕುಟುಂಬ ಸಿಮೆಂಟ್ ಕಂಬದ ತಂತಿ ಬೇಲಿ ಹಾಕಿಕೊಂಡು ಸ್ವಾಧೀನದಲ್ಲಿದ್ದ
ಜಾಗಕ್ಕೆ ಸ್ಥಳೀಯ ನಿವಾಸಿ ಹನೀಫ್ ಎಂಬಾತ ಅಕ್ರಮ ಪ್ರವೇಶಿಸಿ ಜಾತಿನಿಂದನೆಗೈದು ಅವಾಚ್ಯ, ಅಶ್ಲೀಲ ಪದಗಳೊಂದಿಗೆ ನಿಂದಿಸಿದ್ದಲ್ಲದೆ ಸಿಮೆಂಟ್ ಕಂಬದ ತಂತಿ ಬೇಲಿಯನ್ನು ಕಿತ್ತೆಸೆದು ದೌರ್ಜನ್ಯವೆಸಗಿದ ಘಟನೆ ನಡೆದಿದೆ.

ಈ ಸಂದರ್ಭ ತಮ್ಮ ಜಾಗದಲ್ಲಿ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯೊಬ್ಬರು ಘಟನಾವಳಿಯನ್ನು ತಮ್ಮ ಮೊಬೈಲ್ ಗಳಲ್ಲಿ ವೀಡಿಯೋ ಚಿತ್ರೀಕರಿಸುತ್ತಿದ್ದ ವೇಳೆ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಬಟ್ಟೆಯನ್ನು ಎತ್ತಿ ತನ್ನ ಒಳಉಡುಪನ್ನು ಜಾರಿಸಿ ತನ್ನ ಖಾಸಗಿ ಅಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದು
ಜಾಗವನ್ನು ಬಿಟ್ಟು ಹೋಗದಿದ್ದರೆ, ನಿಮ್ಮನ್ನು ಮಾನಭಂಗ ಮಾಡಿ ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ.
ಈತನ ವಿಕೃತಿಯಿಂದ ಭಯಗೊಂಡ ಬಡ ದಲಿತ ಕುಟುಂಬ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೋಲಿಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣ ದೃಶ್ಯಾವಳಿಯ ಸಾಕ್ಷಾಧಾರಗಳ ಸಹಿತ ದೂರು ನೀಡಿದ್ದರು.
ನೊಂದ ಕುಟುಂಬದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಇದೀಗ ವೇಣೂರು ಪೊಲೀಸರು ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.














Post Comment