ಧರ್ಮಸ್ಥಳ ಸೌಜನ್ಯ ಪ್ರಕರಣ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಮರುತನಿಖೆ ಪೂರ್ಣಗೊಳಿಸಲು ಮೂರು ತಿಂಗಳ ಗಡುವು!
ನವದೆಹಲಿ : ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರುತನಿಖೆಗೆ ಮಾನ್ಯ ಸುಪ್ರೀಂ ಕೋರ್ಟ್ ಐತಿಹಾಸಿಕ ಆದೇಶ ನೀಡಿದ್ದು 14 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಪ್ರಕರಣಕ್ಕೆ ಇದೀಗ ಮರುಜೀವ ಬಂದಂತಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಙದಪ್ಪ ಗೌಡ, ಕುಸುಮಾವತಿ ದಂಪತಿಯ ಪುತ್ರಿ, ಉಜಿರೆ ಎಸ್ ಡಿ ಎಂ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಕು.ಸೌಜನ್ಯ 2012 ಅಕ್ಟೋಬರ್ 9ರ ಸಂಜೆ ಕಾಲೇಜಿನಿಂದ ಹೊರಟು
ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಗೆಳತಿಯೊಂದಿಗೆ ಬಂದು ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಸ್ ನಿಲ್ದಾಣದಲ್ಲಿ ಇಳಿದು ಮಣ್ಣಸಂಕದ ಮೂಲಕ ಮನೆಗೆ ನಡೆದುಕೊಂಡು ಹೋಗುವ ದಾರಿ ಮಧ್ಯೆ ನಾಪತ್ತೆಯಾಗಿದ್ದಳು.
ಅಕ್ಟೋಬರ್ 9ರಂದು ನಾಪತ್ತೆಯಾಗಿದ್ದ ಸೌಜನ್ಯ ಮರುದಿನ ಅಕ್ಟೋಬರ್ 10ರಂದು ಮಣ್ಣಸಂಕ ಎಂಬಲ್ಲಿನ ರಸ್ತೆ ಬದಿಯ ಕಾಡಿನಲ್ಲಿ ನಗ್ನ ಶವವಾಗಿ ಪತ್ತೆಯಾಗಿದ್ದಳು.
ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರುತನಿಖೆಗೆ ಮಾನ್ಯ ಸುಪ್ರೀಂ ಕೋರ್ಟ್ ಐತಿಹಾಸಿಕ ಆದೇಶ ನೀಡಿದ್ದು 14 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಪ್ರಕರಣಕ್ಕೆ ಇದೀಗ ಮರುಜೀವ ಬಂದಂತಾಗಿದೆ.
ಪ್ರಕರಣದಲ್ಲಿ ಸಂತೋಷ್ ರಾವ್ ನನ್ನು ಅತ್ಯಾಚಾರ ಆರೋಪಿ ಎಂದು ಬಿಂಬಿಸಿ ಧರ್ಮಸ್ಥಳ ದೇವಳದ ಸಿಬ್ಬಂದಿಗಳ ತಂಡ ಗೊಮ್ಮಟ ಬೆಟ್ಟದಲ್ಲಿ ಹಿಡಿದು ಗುಂಪು ಹಲ್ಲೆಯ ಬಳಿಕ ಪೊಲೀಸರಿಗೊಪ್ಪಿಸಲಾಗಿತ್ತು. ಪ್ರಕರಣದ
ತನಿಖಾಧಿಕಾರಿ ಮತ್ತು ಧಾರ್ಮಿಕ ಪ್ರಭಾವಿಗಳ ಅಭಯ ಹಸ್ತದಲ್ಲಿ ಕಾಣದ ಕೈಗಳು ರಾತ್ರಿ ಬೆಳಗಾಗುವುದರೊಳಗೆ ನೈಜತೆಯನ್ನು ತಿರುಚಿ ಪ್ರಕರಣದ ದಿಕ್ಕು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದರು.
ಶಂಕಿತ ಆರೋಪಿಯಾಗಿದ್ದ ಸಂತೋಷ್ ರಾವ್ ನನ್ನೇ
ಬಂಧಿಸಿ ಜೈಲಿಗೆ ತಳ್ಳಲಾಗಿತ್ತು. ಇದರ ಬೆನ್ನಲ್ಲೇ ಸಂತೋಷ್ ರಾವ್ ನಿರಪರಾಧಿ ಎಂದೂ ಸೌಜನ್ಯ ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆಂದೂ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದೂ ಸಿಬಿಐ ತನಿಖೆಗೆ ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ ನೇತೃತ್ವದಲ್ಲಿ ಸರಣಿ ಹೋರಾಟಗಳು ನಡೆದಿದ್ದವು.

ಇದೇ ಹೋರಾಟ ಹಲವು ವರ್ಷಗಳಿಂದ ರಾಜ್ಯಾದ್ಯಂತ ಮುಂದವರಿದಿತ್ತು. ಪ್ರತಿಭಟನೆಗೆ ಮಣಿದ ಅಂದಿನ ರಾಜ್ಯ ಸರ್ಕಾರ ಬೆಳ್ತಂಗಡಿ ಶಾಸಕ ಕೆ.ವಸಂತ ಬಂಗೇರ ಅವರ ಶಿಫಾರಸ್ಸಿನಂತೆ ಸೌಜನ್ಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ತನಿಖೆಯ ಬಳಿಕ 2023ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಬಂಧಿತ ಆರೋಪಿ ಸಂತೋಷ್ ರಾವ್ ನನ್ನು ನಿರಪರಾಧಿ ಎಂದು ತೀರ್ಪು ನೀಡಿತ್ತು. ಬಳಿಕ ಮತ್ತೆ ಸೌಜನ್ಯ ತಾಯಿ ಕುಸುಮಾವತಿ ಅವರ ನೇತೃತ್ವದಲ್ಲಿ ಬೆಳ್ತಂಗಡಿ ಹಾಗೂ ಜಿಲ್ಲೆ , ರಾಜ್ಯ ಮಾತ್ರವಲ್ಲದೆ ದೆಹಲಿವರೆಗೂ ಮಹೇಶ್ ಶೆಟ್ಟಿ ನೇತೃತ್ವದಲ್ಲಿ ಮರುತನಿಖೆಗಾಗಿ ಪ್ರತಿಭಟನೆ ಮುಂದುವರಿದಿತ್ತು. ಸೌಜನ್ಯ
ಹೋರಾಟದ ನೇತೃತ್ವವನ್ನು ಮಹೇಶ್ ಶೆಟ್ಟಿ ತಿಮರೋಡಿ ಮಾತ್ರವಲ್ಲದೆ ಗಿರೀಶ್ ಮಟ್ಟಣ್ಣವರ್ , ದಿನೇಶ್ ಗಾಣಿಗ, ಜಯಂತ್ ಟಿ., ತಮ್ಮಣ್ಣ ಶೆಟ್ಟಿ , ಪ್ರಸನ್ನ ರವಿ ಮುಂತಾದವರು ಹೋರಾಟವನ್ನು ತೀವ್ರಗೊಳಿಸಿದ್ದರು. ಬಳಿಕ ಸೌಜನ್ಯ ತಾಯಿ ಮಗಳ ಸಾವಿಗೆ ನ್ಯಾಯಕ್ಕಾಗಿ ಸುಪ್ರೀಮ್ ಕೋರ್ಟ್ ಮೆಟ್ಟಲೇರಿದ್ದರು.

ಈ ಮಧ್ಯೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಜಾರಿಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.
ರಾಜ್ಯ ಸರ್ಕಾರದಿಂದ ವರದಿ ಮತ್ತು ಅಭಿಪ್ರಾಯ ಕೇಳಿದ ಸುಪ್ರೀಮ್ ಕೋರ್ಟ್ಗ ಡಿಪಾರು ಆದೇಶದ ವಿರುದ್ದ ನ್ಯಾಯಾಲಯದ ಮೊರೆ ಹೋಗಿದ್ದು ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಇದೀಗ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವುದು ಸೌಜನ್ಯಪರ ಹೋರಾಟದ ಹಾದಿಯಲ್ಲೊಂದು ಚಾರಿತ್ರಿಕ ಬೆಳವಣಿಗೆಯಾಗಲಿದೆ.
ಸೌಜನ್ಯ ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಮ್ ಕೋರ್ಟ್ ಫರ್ಮಾನು ಹೊರಡಿಸಿರುವುದು ಮತ್ತೊಂದು ಮಹತ್ವದ ಸಂಗತಿಯಾಗಿದೆ.














Post Comment