ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೋಷಗಳ ಪರಿಹಾರ, ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ.

ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೋಷಗಳ ಪರಿಹಾರ, ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ.

Share
03 ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೋಷಗಳ ಪರಿಹಾರ, ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ.

ಕೌಕ್ರಾಡಿ ಗ್ರಾಮದ ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಮಾ.18ರಿಂದ 20ರ ತನಕ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ದೋಷಗಳ ಪರಿಹಾರ ಕಾರ್ಯಕ್ರಮ ಹಾಗೂ ಅನುಜ್ಞಾಕಲಶ, ಬಾಲಾಲಯ ಪ್ರತಿಷ್ಠೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಮಾ.18ರಂದು ಬೆಳಿಗ್ಗೆ 8ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ, ಸರ್ಪಸಂಸ್ಕಾರ ಮಂಗಳ ಹೋಮ, ಆಶ್ಲೇಷಬಲಿ, ಪವಮಾನ ಹೋಮ, ವಟು ಆರಾಧನೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ, ಸಂಜೆ 5ರಿಂದ ದುರ್ಗಾಪೂಜೆ, ಸುದರ್ಶನ ಹೋಮ, ಅಘೋರ ಹೋಮ, ಅವಾಹನೆ, ಬಾಧಾಕರ್ಷಣೆ, ಉಚ್ಛಾಟನೆ, ಬಾಳ್ತಿಲ್ಲಾಯ ಕುಟುಂಬಸ್ಥರಿಂದ ಭದ್ರದೀಪ ಸಮರ್ಪಣೆ, ಮುಷ್ಠಿ ಕಾಣಿಕೆ ಸಮರ್ಪಣೆ ನಡೆಯಿತು.01-300x200 ದೋಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೋಷಗಳ ಪರಿಹಾರ, ಅನುಜ್ಞಾ ಕಲಶ, ಬಾಲಾಲಯ ಪ್ರತಿಷ್ಠೆ.
ಮಾ.19ರಂದು ಬೆಳಿಗ್ಗೆ ಗಣಪತಿ ಹೋಮ, ತಿಲಹೋಮ, ಕೂಷ್ಮಾಂಡ ಹೋಮ, ದ್ವಾದಶಮೂರ್ತಿ ಆರಾಧನೆ, ಸಾಯುಜ್ಯ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ ನಡೆಯಿತು.
ಮಾ.20ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಸಂಹಾರತತ್ತ್ವ ಹೋಮ, ತತ್ತ್ವ ಕಲಶ ಪೂಜೆ, ಅನುಜ್ಞಾಕಲಶ ಪೂಜೆ, ಅನುಜ್ಞಾಕಲಶಾಭಿಷೇಕ, ಸಂಹಾರ ತತ್ತ್ವ ಕಲಶಾಭಿಷೇಕ, ಧ್ಯಾನ ಸಂಕೋಚ ಕ್ರಿಯೆ, ಜೀವಕಲಶ ಪೂಜೆ, ಜೀವೋದ್ವಾಸನ ಕ್ರಿಯೆ, ಬಾಲಾಲಯದಲ್ಲಿ ಶ್ರೀ ಮಹಾವಿಷ್ಣು ಹಾಗೂ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ನೂಜಿನ್ನಾಯ, ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಬಾಳ್ತಿಲ್ಲಾಯ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಅನುದೀಪ್ ಬಾಳ್ತಿಲ್ಲಾಯ, ಕಾರ್ಯದರ್ಶಿ ರವಿ ಭಟ್ ನೆಲ್ಯಾಡಿ, ಕೋಶಾಧಿಕಾರಿ ಪದ್ಮನಾಭ ಶೆಟ್ಟಿ ದೋಂತಿಲ, ಜೊತೆ ಕಾರ್ಯದರ್ಶಿ ಉದಯ ಕುಮಾರ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ  ಬಾಣಜಾಲು, ಸರ್ವೋತ್ತಮ ಗೌಡ ನೆಲ್ಯಾಡಿ, ಖ್ಯಾತ ಜ್ಯೋತಿಷಿ ಶ್ರೀಧರ ಗೋರೆ, ನೆಲ್ಯಾಡಿ ವರ್ತಕರ ಸಂಘದ ಅಧ್ಯಕ್ಷ ಸತೀಶ್ ದುರ್ಗಾಶ್ರೀ, ನಿವೃತ್ತ ಶಿಕ್ಷಕ ರವೀಂದ್ರ ಟಿ, ವೆಂಕಟರಮಣ ಭಟ್, ವಿ ಆರ್ ಹೆಗ್ಡೆ, ಬಾಳ್ತಿಲ್ಲಾಯ ಕುಟುಂಬಸ್ಥರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ಊರ ಹತ್ತು ಸಮಸ್ತರು ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Post Comment

ಟ್ರೆಂಡಿಂಗ್‌

error: Content is protected !!