ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ

ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ

Share
IMG-20260923-WA0003-695x1024 ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ

ಬೆಳ್ತಂಗಡಿ : ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ
ಪೌರ ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ
ಅವರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೆಕೆಂದು ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಜಯಾನಂದ ಗೌಡ ಸರಕಾರವನ್ನು ಒತ್ತಾಯಿಸಿದ್ದಾರೆ.

ಕುಡಿಯುವ ನೀರು ಸರಬರಾಜು ಸಾರ್ವಜನಿಕರ ದೈನಂದಿನ ಬದುಕಿಗೆ ನೇರವಾಗಿ ಸಂಬಂಧಿಸಿದ ಅತ್ಯಗತ್ಯ ಸೇವೆಯಾಗಿದ್ದು ಯಾವುದೇ ಪರಿಸ್ಥಿತಿಯಲ್ಲೂ ಜನರಿಗೆ ನೀರು ಪೂರೈಸುವಲ್ಲಿ ಪೌರ ನೀರು ಸರಬರಾಜು ನೌಕರರ ಸೇವೆ ಮಹತ್ವದ್ದಾಗಿದೆ ಎಂದಿರುವ ಅವರು‌ ಇಂತಹ ನೌಕರರ ಸೇವಾ ಸಮಸ್ಯೆಗಳು, ವೇತನ ಹಾಗೂ ಇತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸದೆ, ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ನೌಕರರು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಅವರ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಸ್ಪಂದಿಸಿ ನ್ಯಾಯಯುತ ಹಾಗೂ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು‌ ಒತ್ತಾಯಿಸಿದ್ದಾರೆ.

IMG-20260615-WA0021-26 ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ

ಸಾರ್ವಜನಿಕರಿಗೆ ಕುಡಿಯುವ ನೀರಿನಂತಹ ಅಗತ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಲ್ಲದೆ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಲ್ಲಿನ ನೌಕರರ ಸೇವಾ ಭದ್ರತೆ, ಗೌರವ ಮತ್ತು ಕಲ್ಯಾಣವೂ ಅತ್ಯಂತ ಮುಖ್ಯವಾಗಿದ್ದು ಸರ್ಕಾರವು ಪೌರ ನೀರು ಸರಬರಾಜು ನೌಕರರ ಪ್ರತಿನಿಧಿಗಳೊಂದಿಗೆ ಶೀಘ್ರ ಮಾತುಕತೆ ನಡೆಸಿ, ಅವರ ನ್ಯಾಯಯುತ ಬೇಡಿಕೆಗಳಿಗೆ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಪಟ್ಟಣ ಪಂಚಾಯತ್ ಜಯಾನಂದ ಗೌಡ ಪ್ರಜ್ವಲ್ ಒತ್ತಾಯಿಸಿದರು.

IMG-20260921-WA0003-4-1024x1024 ಪೌರ ನೀರು ಸರಬರಾಜು ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು : ಜಯಾನಂದ ಗೌಡ

Post Comment

ಟ್ರೆಂಡಿಂಗ್‌

error: Content is protected !!