ಧರ್ಮಸ್ಥಳ ಸೌಜನ್ಯ ಪ್ರಕರಣ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಎಸ್.ಐ.ಟಿ ರಚಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಳ್ತಂಗಡಿ : 2012ರಲ್ಲಿ ಧರ್ಮಸ್ಥಳದಲ್ಲಿ ನಡೆದ
ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರಕಾರ ಎಸ್.ಐ.ಟಿ. ರಚಿಸಿ ಆದೇಶ ಹೊರಡಿಸಿದ್ದು
ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ.
ಉಳಿದಂತೆ ಎಸ್ .ಐ.ಟಿ. ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್. ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಲಸಾಗರ್ ಐ.ಪಿ.ಎಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ಮುಂತಾದವರನ್ನು ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ.

2025ರ ಜುಲೈ ತಿಂಗಳಲ್ಲಿ ಧರ್ಮಸ್ಥಳದ ಸಮೂಹ ಸಮಾಧಿ ಪ್ರಕರಣದ ತನಿಖೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಡಾ.ಪ್ರಣಬ್ ಮೋಹಂತಿ ನೇತೃತ್ವದ ಎಸ್.ಐ.ಟಿ ರಚಿಸಿದ್ದು ಇದೀಗ 2026ನೇ ಸೆಪ್ಟೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದಂತೆ ಇದೀಗ
ಸೆಪ್ಟೆಂಬರ್ ಕೊನೆಯ ವಾರದಲ್ಲಿ ಸೌಜನ್ಯ ಪ್ರಕರಣ ತನಿಖೆಯನ್ನು ಎಸ್.ಐ.ಟಿಗೆ ವಹಿಸಿದೆ.

ಅಚ್ಚರಿಯ ಸಂಗತಿ ಎಂದರೆ 2026ನೇ ಒಂದೇ ವರ್ಷದಲ್ಲಿ ಧರ್ಮಸ್ಥಳದ ಎರಡು ಗಂಭೀರ ಪ್ರಕರಣಗಳನ್ನು ಎರಡು ಎಸ್ ಐ ಟಿಗಳು ತನಿಖೆ ನಡೆಸುತ್ತಿರುವುದು!
ಇದೀಗ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರಕಾರ ರಚಿಸಿರುವ ಎಸ್ ಐ ಟಿ ತನಿಖೆ ಬಗ್ಗೆ ನಿರೀಕ್ಷೆ ಹೆಚ್ಚಿದೆ.















Post Comment