ಸುದೆಮುಗೇರಿನಲ್ಲಿ’ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ’ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ(ರಿ) ಮತ್ತು ಸ್ವಸಹಾಯ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಸಂಜೆ ನೆರವೇರಿತು.
ಬೆಳ್ತಂಗಡಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ
ವಿಜಯೇಂದ್ರ ಟಿ.ಹೆಚ್. ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶ್ವ ಗ್ರಾಹಕ ಹಕ್ಕುಗಳ ದಿನದ ಮಹತ್ವವನ್ನು ವಿವರಿಸಿ ಶುಭ ಹಾರೈಸಿದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಅಧ್ಯಕ್ಷತೆವಹಿಸಿ ಮಾತನಾಡಿದರು.ಈ ಸಂದರ್ಭ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲ ಶಿವಕುಮಾರ್ ಎಸ್ .ಎಂ. ‘ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ’ ವಿಷಯದ ಬಗ್ಗೆ ವಿಷಯ ಮಂಡನೆ ಮಾಡುತ್ತಾ ಗ್ರಾಹಕ ಹಕ್ಕುಗಳ ಬಗ್ಗೆ ಜನರು ಜಾಗೃತರಾಗುವಂತೆ ಕರೆ ನೀಡಿದರು.ಜಿಲ್ಲಾಪಂಚಾಯತ್ ಇಂಜಿನಿಯರ್ ವಿಭಾಗದ ಅಶೋಕ್ ಸುದೆಮುಗೇರು ಸ್ವಾಗತಿಸಿ ಬಳಿಕ ವಂದಿಸಿದರು.
ಕಾರ್ಯಕ್ರಮದಲ್ಲಿ ಸುದೆಮುಗೇರು ಪರಿಸರದ ನಿವಾಸಿಗಳು , ಪ್ರಮುಖರು, ಭಾಗವಹಿಸಿದರು.















Post Comment