ನಿಯಂತ್ರಣ ತಪ್ಪಿ ಕಾರು ಪಲ್ಟಿ : ಚಾಲಕ ಸಾವು
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಪರಿಣಾಮ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ನಡೆದಿದೆ.ಬೆಳ್ತಂಗಡಿ ತಾಲೂಕು ಲಾಯಿಲ ನಿವಾಸಿ ಚಾಲಕ ಪ್ರೈಸ್ ಮ್ಯಾಥ್ಯೂ (32) ಮೃತಪಟ್ಟವರು.ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟುಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Post Comment