ಅಕ್ರಮ ಗೋಸಾಗಾಟ ಸಾಗಾಟ : ಆರೋಪಿಗಳ ಬಂಧನ
ಬೆಳ್ತಂಗಡಿ : ವೇಣೂರು ಸಮೀಪದ ಬಜಿರೆ ಎಂಬಲ್ಲಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ.
ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ರಕ್ಷಣೆ ಮಾಡಲಾಗಿದೆ. ಇತ್ತೀಚೆಗೆ ತಾಲೂಕಿನ ಅಲ್ಲಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣಗಳು ಸರಣಿಯಾಗಿ ಬೆಳಕಿಗೆ ಬರುತ್ತಿದ್ದು
ಕಸಾಯಿಖಾನೆಗಳು ತಲೆಯೆತ್ತುತ್ತಿದೆ. ಗೋವುಗಳನ್ನು ಕದ್ದು ಸಾಗಾಟ ಮಾಡುವ ದಂಧೆ ರಾಜಾರೋಷವಾಗಿ ನಡೆಯುತ್ತಿದೆ ಇದರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬ್ಯಾಂಕ್ ನಿಂದ ಸಾಲ ಪಡೆದು ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಹೈನುಗಾರರು ಪೊಲೀಸರು ಇನ್ನಾದರೂ ಎಚ್ಚೆತ್ತುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
Post Comment