ಅಕ್ರಮ ಮರಳು ಸಾಗಾಟ ಯತ್ನ : ವಾಹನ ಸಹಿತ ವಶಕ್ಕೆ 

ಅಕ್ರಮ ಮರಳು ಸಾಗಾಟ ಯತ್ನ : ವಾಹನ ಸಹಿತ ವಶಕ್ಕೆ 

Share

ಬೆಳ್ತಂಗಡಿ  : ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದೆ. ಮರಳು ದಂಧೆಕೋರರನ್ನು ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ಸೋಮವಾರ ದಾಳಿ ನಡೆಸಿ ವಾಹನ ಸಹಿತ ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ  ತಾಲೂಕಿನ ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ, ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ, ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಬೆಳ್ತಂಗಡಿ ಎಸೈ ಮುರಳೀಧರ್ ಕೆ.ಜಿ,  (ಕಾ&ಸು)  ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದಾಗ, ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರುಗಳು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್‌ ಮೂಲಕ  ಸಾಗಾಟ ಮಾಡಲು ಯತ್ನಿಸುತ್ತಿರುವುದು ಕಂಡು ಬಂದಿದೆ. 

ದಾಳಿ ನಡೆಸಿದ ಪೊಲೀಸರು  ವಾಹನ ಹಾಗೂ ಇತರ ಸೊತ್ತುಗಳನ್ನು  ಮುಂದಿನ ಕಾನೂನುಕ್ರಮಕ್ಕಾಗಿ ವಶಪಡಿಸಿಕೊಂಡಿದ್ದು  ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Post Comment

ಟ್ರೆಂಡಿಂಗ್‌