ಕೊಕ್ಕಡ: ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ- ಆರೋಪಿ ಪಶು ವೈದ್ಯಕೀಯ  ಪರೀಕ್ಷಕನಿಗೆ ನ್ಯಾಯಾಂಗ ಬಂಧನ

ಕೊಕ್ಕಡ: ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ- ಆರೋಪಿ ಪಶು ವೈದ್ಯಕೀಯ  ಪರೀಕ್ಷಕನಿಗೆ ನ್ಯಾಯಾಂಗ ಬಂಧನ

Share
IMG-20240516-WA0015-1 ಕೊಕ್ಕಡ: ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ-                                                  ಆರೋಪಿ ಪಶು ವೈದ್ಯಕೀಯ  ಪರೀಕ್ಷಕನಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ಮೇ 13ರ ಸೋಮವಾರ ಸಂಜೆ  ಕೊಕ್ಕಡ ವೃತ್ತದ ಬಳಿ ಅರಸಿನಮಕ್ಕಿ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾ‌ರ್ ಎಂಬಾತ   ಕುಡಿದ ಮತ್ತಿನಲ್ಲಿ ಹಲ್ಲೆ ನಡೆಸಿ ಪಟ್ರಮೆ ಗ್ರಾಮದ ಕೃಷ್ಣಪ್ಪ ಎಂಬವರು ಮೃತಪಟ್ಟ ಪ್ರಕರಣದಲ್ಲಿ ಬಂಧಿತ ಆರೋಪಿಯನ್ನು ಪೊಲೀಸರು ಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು  ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ತಾಲೂಕು ಪಟ್ರಮೆ ಗ್ರಾಮದ ನಿವಾಸಿ ಕಿಟ್ಟ ಯಾನೆ ಕೃಷ್ಣಪ್ಪ (58) ಎಂಬವರು ಅರಸಿನಮಕ್ಕಿ ಪಶು ಚಿಕಿತ್ಸಾ ಕೇಂದ್ರದ ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾ‌ರ್ ಎಂಬಾತ   ಕುಡಿದ ಮತ್ತಿನಲ್ಲಿ ಕೈಯಿಂದ ನಡೆಸಿದ ಹಲ್ಲೆಯ ಪರಿಣಾಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಬಗ್ಗೆ ಮೃತ ಕೃಷ್ಣಪ್ಪ ಅವರ ಪತ್ನಿ ಭಾರತಿ ಅವರು ಧರ್ಮಸ್ಥಳ ಪೊಲೀಸರಿಗೆ ಆರೋಪಿ , ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಕುಮಾರ್ ವಿರುದ್ಧ ದೂರು ನೀಡಿದ್ದರು. ದೂರಿನಂತೆ ಧರ್ಮಸ್ಥಳ ಪೊಲೀಸರು ಆರೋಪಿ ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಆರೋಪಿಯನ್ನು ಮೇ.14ರ ಮಂಗಳವಾರದಂದು ಬಂಧಿಸಲಾಗಿದೆ. ಇದೀಗ  ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು  ಈತನಿಗೆ ನ್ಯಾಯಾಲಯವು  14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ವಸಂತ ಆರ್.ಆಚಾರ್ ಮತ್ತು ತಂಡ ಪ್ರಕರಣದ ತನಿಖೆ ನಡೆಸುತ್ತಿದೆ.

Post Comment

ಟ್ರೆಂಡಿಂಗ್‌